ಬಳ್ಳಾರಿ : ಬ್ಯಾನರ್ ಅಳವಡಿಕೆ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಭಂದಪಟ್ಟಂತೆ 42ನೇ ಎಸಿಜೆಎಂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 26 ಆರೋಪಿಗಳು ಕೂಡ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಒಟ್ಟು 26 ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿ ಜೈಲಲ್ಲಿ ಇರಿಸಲಾಗಿದೆ. ಸದ್ಯ ಈ ವಿಚಾರಣೆಯೂ 19ನೇ ತಾರೀಖಿಗೆ ಮುಂದೂಡಲಾಗಿದ್ದು, ಇದೀಗ 4 ಆರೋಪಿಗಳು ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ತನಿಖೆ ವೇಳೆ ತಿಳಿದಿರುವಂತೆ ಶಾಸಕ ಭರತ್ ರೆಡ್ಡಿ ಅತ್ಯಾಪ್ತ ಸತೀಶ್ ರೆಡ್ಡಿಯ ಗನ್‌ಮ್ಯಾನ್ ಗುರುಚರಣ್ ಸಿಂಗ್ ಫೈರ್ ಮಾಡಿದ್ದ ಬಂದೂಕಿನ ಬುಲೆಟ್ ತಗುಲಿಯೇ ರಾಜಶೇಖರ್ ಮೃತಪಟ್ಟಿದ್ದಾರೆ. 12 ಎಂಎಂ ಬುಲೆಟ್ ಅನ್ನು ರಾಜಶೇಖರ್ ದೇಹದಿಂದ ಪೋಸ್ಟ್ ಮಾರ್ಟಮ್ ವೇಳೆ ಹೊರ ತೆಗೆಯಲಾಗಿದೆ. ಹೊರ ತೆಗೆದ ಬುಲೆಟ್ ಫೋರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಬಳ್ಳಾರಿ ಬ್ಯಾನರ್ ಘರ್ಷಣೆ ; ಸತೀಶ್ ರೆಡ್ಡಿ ಗನ್ ಮ್ಯಾನ್ ಗುಂಡೇಟಿಗೆ ಕಾರ್ಯಕರ್ತ ಬಲಿ |ಪಂಜಾಬ್ ಮೂಲದ ಇಬ್ಬರು ಅರೆಸ್ಟ್!



















