ಬೆಂಗಳೂರು : ಬಳ್ಳಾರಿಯಲ್ಲಿ ನಡೆದ ಹಿಂಸಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿ ಮತ್ತು ಆತಂಕದ ವಾತಾವರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಶಾಸಕ ಜನಾರ್ದನ ರೆಡ್ಡಿಗೆ ಕರೆ ಮಾಡಿ ಧೈರ್ಯ ತುಂಬಿದ್ದಾರೆ.
ದೇವೇಗೌಡರು ಶಾಸಕ ಜನಾರ್ದನ ರೆಡ್ಡಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಹಾಗೆಯೇ ಜನಾರ್ದನ ರೆಡ್ಡಿಗೆ ಶಾಂತಿಯುತವಾಗಿ ಇರುವಂತೆ ಸೂಚನೆ ನೀಡಿದ್ದಾರೆ.
ಇಡೀ ಘಟನೆ ಗಮನಿಸಿದ್ದೇನೆ. ಇದು ರಾಜ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ರಾಜಕಾರಣದಲ್ಲಿ ಇಂತಹ ಘಟನೆ ನಡೆದಿರಲಿಲ್ಲ. ಶಾಸಕನ ಮೇಲೆ, ಅವರ ಮನೆ ಮೇಲೆ ಗುಂಡಿನ ದಾಳಿ ನಡೆದಿರಲಿಲ್ಲ. ಹೀಗಾಗಿ ಕಾನೂನಾತ್ಮಕ ಹೋರಾಟ ಮಾಡುವಂತೆ ರೆಡ್ಡಿಗೆ ದೇವೇಗೌಡರು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ : ಬಳ್ಳಾರಿ ಫೈರಿಂಗ್ ಕೇಸ್ | ಮೃತ ರಾಜಶೇಖರ್ ರೆಡ್ಡಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಿದ ಸಚಿವ ಜಮೀರ್!



















