ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಯುಟ್ಯೂಬರ್ ಸಮೀರ್ ಎಂ.ಡಿ ಇಂದು(ಶನಿವಾರ) ಕೂಡ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸಿ ಹಿಂತಿರುಗಿದ್ದಾರೆ.
ತನ್ನ ವಕೀಲರೊಂದಿಗೆ ಆಗಮಿಸಿದ ಸಮೀರ್ ಎಂ.ಡಿ. ಅವರು ಬೆಳ್ತಂಗಡಿ ಠಾಣೆಗೆ ತೆರೆಳಿ ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಹಿಂತಿರುಗಿದ್ದಾರೆ ಎಂದು ತಿಳಿದು ಬಂದಿದೆ.