ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Executive Recruitment 2025) ಖಾಲಿ ಇರುವ 24 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕನ್ಸಲ್ಟಂಟ್ ಹಾಗೂ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಕುರಿತ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಕನ್ಸಲ್ಟಂಟ್, ಮ್ಯಾನೇಜರ್
ಒಟ್ಟು ಹುದ್ದೆಗಳು: 24
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 31
ಕರ್ನಾಟಕ ಹಾಗೂ ಕೇರಳದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಅರ್ಹರನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ, ಬಿ.ಇ, ಬಿ.ಟೆಕ್, ಎಂಬಿಎ, ಡಿಪ್ಲೋಮಾ, ಎಂಬಿಬಿಎಸ್ ಕೋರ್ಸ್ ಗಳನ್ನು ಮುಗಿಸಿರಬೇಕು. 29 ವರ್ಷದಿಂದ 51 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ: ಜೆಸಿಐ ಕುಂದಾಪುರ 50ರ ಸಂಭ್ರಮ : ಡಿ.21 ರಿಂದ 23ರವರೆಗೆ ‘ನಾಟಕೋತ್ಸವ’



















