ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Executive Recruitment 2025) ಖಾಲಿ ಇರುವ 50 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಗ್ರೂಪ್ ಎ, ಗ್ರೂಪ್ ಬಿ ಹಾಗೂ ಗ್ರೂಪ್ ಸಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ವಿವರ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಗ್ರೂಪ್ ಎಬಿಸಿ
ಒಟ್ಟು ಹುದ್ದೆಗಳು: 50
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 24
ಕರ್ನಾಟಕದ ಬೆಂಗಳೂರಿನಲ್ಲಿಯೇ ಕೇಂದ್ರ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕ ನಿಗದಿಪಡಿಸಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ಅರ್ಹರನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವೇತನದ ಕುರಿತು ಶೀಘ್ರದಲ್ಲೇ ಮಾಹಿತಿ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ: SBIನಲ್ಲಿ 996 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ



















