ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿರುವ ಭಾರತ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ಸಂಸ್ಥೆಯಲ್ಲಿ ಖಾಲಿ ಇರುವ 682 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 682 ಚೀಫ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್, ಡೆಪ್ಯೂಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 12 ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ : ಭಾರತ ಎರ್ಥ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು : ನಾನ್ ಎಕ್ಸಿಕ್ಯೂಟಿವ್, ಮ್ಯಾನೇಜ್ ಮೆಂಟ್ ಟ್ರೈನಿ
ಒಟ್ಟು ಹುದ್ದೆಗಳ ಸಂಖ್ಯೆ : 682
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಯಾವ ಹುದ್ದೆ ಎಷ್ಟು ಖಾಲಿ?
ಚೀಫ್ ಜನರಲ್ ಮ್ಯಾನೇಜರ್ 3, ಜನರಲ್ ಮ್ಯಾನೇಜರ್ 2, ಡೆಪ್ಯೂಟಿ ಜನರಲ್ ಮ್ಯಾನೇಜರ್ 9, ಮ್ಯಾನೇಜರ್ 1, ಅಸಿಸ್ಟಂಟ್ ಮ್ಯಾನೇಜರ್ 100, ಸೆಕ್ಯುರಿಟಿ ಗಾರ್ಡ್ 44, ಮ್ಯಾನೇಜ್ ಮೆಂಟ್ ಟ್ರೈನಿ 100, ನಾನ್ ಎಕ್ಸಿಕ್ಯೂಟಿವ್ 440 ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. 10ನೇ ತರಗತಿ, ಡಿಪ್ಲೋಮಾ, ಬಿಇ, ಬಿ.ಟೆಕ್, ಐಟಿಐ ಸೇರಿ ಹಲವು ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 40 ಸಾವಿರ ರೂ.ನಿಂದ 2.8 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿಯವರಿಗೆ 5 ವರ್ಷ ಹಾಗೂ ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ, ದಾಖಲೆ ಪರಿಶೀಲನೆ, ವೈದ್ಯಕೀಯ ತಪಾಸಣೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವವರು bemlindia.in ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.



















