ಬೆಂಗಳೂರು : ನೀವೇನಾದರೂ ಎಂಜಿನಿಯರಿಂಗ್ ಮುಗಿಸಿ, ಸರ್ಕಾರದ ಹುದ್ದೆಗಳಿಗಾಗಿ ಸಿದ್ಧತೆ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Junior Executive Recruitment 2026) ಖಾಲಿ ಇರುವ 13 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 13 ಎಂಜಿನಿಯರ್ ಹಾಗೂ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಎಂಜಿನಿಯರ್, ಮ್ಯಾನೇಜರ್
ಒಟ್ಟು ಹುದ್ದೆಗಳು: 13
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮಾರ್ಚ್ 30
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಂಜಿನಿಯರಿಂಗ್, ಡಿಪ್ಲೋಮಾ, ಎಂ.ಟೆಕ್, ಪದವಿ ಮುಗಿಸಿದವರಿಗೆ ಒಳ್ಳೆಯ ಅವಕಾಶವಾಗಿದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ಸಡಿಲಿಕೆ ಅನ್ವಯವಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 40 ಸಾವಿರ ರೂಪಾಯಿಯಿಂದ 3 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ನಡೆಸಲಾಗುತ್ತದೆ. ಇದಾದ ಬಳಿಕ ದಾಖಲೆ ಪರಿಶೀಲನೆ ಮಾಡಲಾಗುತ್ತದೆ. ನಂತರ ವೈದ್ಯಕೀಯ ತಪಾಸಣೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ..
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು
ಇದನ್ನೂ ಓದಿ : ಏ.1ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಮುರ್ಮು.. ತುಮಕೂರಲ್ಲಿ ಬಿಗಿ ಭದ್ರತೆ!



















