ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಲಭಿಸಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Recruitment 2026) ಖಾಲಿ ಇರುವ 83 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಎಂಜಿನಿಯರ್ ಇತ್ಯಾದಿ
ಒಟ್ಟು ಹುದ್ದೆಗಳು: 83
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 3
ಎಂಜಿನಿಯರ್ ಹಾಗೂ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಬಿ.ಇ, ಬಿ.ಟೆಕ್, ಎಂಬಿಬಿಎಸ್, ಎಂಡಿ, ಎಂ.ಇ, ಎಂಟೆಕ್ ಕೋರ್ಸ್ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸು 48 ವರ್ಷ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 2.6 ಲಕ್ಷ ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ bemlindia.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು.


















