ಬೆಂಗಳೂರು : ನೀವೇನಾದರೂ ಡಿಪ್ಲೋಮಾ ಮುಗಿಸಿ, ಸರ್ಕಾರದ ಹುದ್ದೆಗಳಿಗಳನ್ನು ಪಡೆಯಲು ಸಿದ್ಧತೆ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಗುಡ್ ನ್ಯೂಸ್ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML Recruitment 2026) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 10 ಅಸಿಸ್ಟಂಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಸಂದರ್ಶನದ ಮೂಲಕ ನೇಮಕಾತಿ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆ ಹೆಸರು: ಅಸಿಸ್ಟಂಟ್ ಎಂಜಿನಿಯರ್
ಒಟ್ಟು ಹುದ್ದೆಗಳು: 10
ನೇಮಕಾತಿ ವಿಧಾನ: ನೇರ ಸಂದರ್ಶನ
ಸಂದರ್ಶನದ ದಿನಾಂಕ: ಮೇ 3
ಕರ್ನಾಟಕದ ಬೆಂಗಳೂರು, ಮೈಸೂರು ಹಾಗು ಕೇರಳದ ಪಾಲಕ್ಕಾಡ್ ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಸಂದರ್ಶನಕ್ಕೆ ಹಾಜರಾಗಬಹುದು. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿಯಿಂದ 1.2 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಸಂದರ್ಶನಕ್ಕೆ ಹಾಜರಾಗಲು ಬಯಸುವವರು ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bemlindia.in ಗೆ ಭೇಟಿ ನೀಡಬೇಕು. ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು. ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಿಗದಿತ ದಿನಾಂಕದಂದು ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನ ನಡೆಯುವ ಸ್ಥಳ: BEML Soudha, No.23/1, 4th Main, S R Nagar, Bengaluru – 560027.
ಇದನ್ನೂ ಓದಿ : ಈ ಕಾರಿಗೆ ಸೂರ್ಯನ ಕಿರಣಗಳೇ ಇಂಧನ : ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲು ಸಜ್ಜಾಯ್ತು ‘ವೈವ್ ಇವಾ’



















