ಬೆಂಗಳೂರು : ಬಂಗಾಳ ಫಲಿತಾಂಶದಿಂದ ಬಾಂಗ್ಲಾ, ಪಾಕಿಸ್ತಾನಕ್ಕೆ ಆಘಾತವಾಗಿದೆ, ಡಿಎಂಕೆ ಹತಾಶ ಮನೋಭಾವದಲ್ಲಿ ಗೂಡು ಸೇರಿದೆ ಎಂದು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಈ ಬಗ್ಗೆ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಇಂದು ಸುದಿನ. ಪ್ರಮುಖವಾಗಿ ಪಶ್ಚಿಮ ಬಂಗಾಳ ಚುನಾವಣೆ ದೇಶದ ಗಮನ ಸೆಳೆಯುತ್ತಿದೆ. ಅಸ್ಸಾಂ, ಪುದುಚೇರಿ ಮತ್ತು ಬಂಗಾಳದಲ್ಲಿ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಬಹುಮತ ಬಂದಿದೆ. ಪರಿಣಾಮ ಡಿಎಂಕೆ ಹತಾಶ ಮನೋಭಾವದಲ್ಲಿ ಗೂಡು ಸೇರಿದ್ದಾರೆ ಎಂದು ಕುಟುಕಿದ್ದಾರೆ.
ಮೋದಿ ಮೂರು ಬಾರಿ ಪ್ರಧಾನಿ ಆಗಿದ್ದಾರೆ. ಬಿಜೆಪಿ ದೊಡ್ಡ ಅಲೆ ದೇಶದಲ್ಲಿದೆ ಅನ್ನೋದು ಸಾಬೀತಾಗಿದೆ. ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಾಗಿದೆ ಎಂದು ಟಾಂಗ್ ಕೊಟ್ಟಿದ್ದಾರೆ.
ಮಮತಾ ಬ್ಯಾನರ್ಜಿ ಅವರು ದೇಶದ್ರೋಹಿಗಳಿಗೆ ಬಾಗಿಲು ತೆರೆದುಕೊಟ್ಟಿದ್ದರು. ಆದರೆ ಇಂದಿನ ಫಲಿತಾಂಶ ದೇಶದ ಭದ್ರತೆಗೆ ಸುವರ್ಣ ಹಾದಿ ಮಾಡಿಕೊಟ್ಟಿದೆ. ಕೇರಳದಲ್ಲಿ ಬಿಜೆಪಿ ತನ್ನ ಖಾತೆ ಪ್ರಾರಂಭ ಮಾಡಲಿದೆ. ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಸಾಧಿಸಿರುವ ಮುನ್ನಡೆ ಪ್ರಮುಖವಾಗಿದೆ ಎಂದು ಆರ್. ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ : ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಅಭ್ಯರ್ಥಿ ಸಮರ್ಥ್ ಶಾಮನೂರು ಜಯಭೇರಿ!


















