ಬೆಂಗಳೂರು: ‘ಟಾಕ್ಸಿಕ್’ ಸಿನಿಮಾ ವಿರುದ್ಧ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ತೀವ್ರ ಆಕ್ಷೇಪ ವ್ಯಕ್ತಪಡಿಸಿ ದೂರು ಸಲ್ಲಿಸಿದೆ. ಸಿನಿಮಾದ ಕೆಲವು ದೃಶ್ಯಗಳು ಕ್ರೈಸ್ತ ಸಮುದಾಯಕ್ಕೆ ಮುಜುಗರ ಉಂಟುಮಾಡಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಒಕ್ಕೂಟ ಆರೋಪಿಸಿದೆ.

ಸಿನಿಮಾದಲ್ಲಿ ದೇವದೂತ ಸಂತ ಮಿಕಾಯೇಲ್‌ಗೆ ಅವಮಾನ ಮಾಡಲಾಗಿದ್ದು, ದೇವದೂತರ ಮುಂದೆ ಅಶ್ಲೀಲ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯೂಟ್ಯೂಬ್‌ನಲ್ಲಿ ಪ್ರಕಟವಾದ ಪೋಸ್ಟ್ ಹಾಗೂ ಆಕ್ಷೇಪಾರ್ಹ ದೃಶ್ಯಗಳನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಒಕ್ಕೂಟ ಆಗ್ರಹಿಸಿದೆ.
ಈ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹಸಚಿವರು ಹಾಗೂ ಸೆನ್ಸರ್ ಮಂಡಳಿಗೆ ದೂರು ನೀಡಲಾಗಿದೆ. ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಈ ಬಗ್ಗೆ ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ.
ದೃಶ್ಯಗಳನ್ನು ತಕ್ಷಣವೇ ತೆಗೆದು, ಕ್ರೈಸ್ತ ಸಮುದಾಯದ ಕ್ಷಮೆ ಕೇಳಬೇಕೆಂದು ಒತ್ತಾಯಿಸಿರುವ ಒಕ್ಕೂಟ, ಅಗತ್ಯವಿದ್ದರೆ ಸಿನಿಮಾ ವಿರುದ್ಧ ಕಾನೂನು ಹೋರಾಟಕ್ಕೂ ಮುಂದಾಗುವುದಾಗಿ ಎಚ್ಚರಿಸಿದೆ.
ಇದನ್ನೂ ಓದಿ : ಮಥುರಾದಲ್ಲಿ ಬೆಚ್ಚಿಬೀಳಿಸುವ ಘಟನೆ | ಮೂವರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ.. ಗೋಡೆಯ ಮೇಲೆ ಡೆತ್‌ನೋಟ್!



















