ಬೆಂಗಳೂರು : ಬೆಂಗಳೂರಿನ ಹೊಸೂರು ರಸ್ತೆಯಲ್ಲಿ ಆಟೋವೊಂದು ಓವರ್ ಟೇಕ್ ಮಾಡಲು ಹೋಗಿ, ಮಗುಚಿ ಬಿದ್ದ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಇದೀಗ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋದಲ್ಲಿ ಆಟೋ ರಿಕ್ಷಾವೊಂದು ವೇಗವಾಗಿ ಹೋಗುತ್ತಿದ್ದ ಟ್ರಕ್ವೊಂದನ್ನು ಓವರ್ ಟೇಕ್ ಮಾಡಲು ಹೋಗಿ ಪಲ್ಟಿಯಾಗಿದೆ. ವಿಡಿಯೋವನ್ನು ನೋಡಿ ಸೋಶಿಯಲ್ ಮೀಡಿಯಾ ಬಳಕೆದಾರರೂ ಕಮೆಂಟ್ ಮಾಡಿದ್ದು, ಬೆಂಗಳೂರಿನಲ್ಲಿ ಇಂತಹ ಅನೇಕ ಘಟನೆಗಳು ನಡೆಯುತ್ತಿದೆ. ಇದಕ್ಕೆ ಚಾಲಕರ ಅಜಾಗರೂಕತೆಯೇ ಕಾರಣ ಎಂದು ಹೇಳಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಈ ಆಟೋರಿಕ್ಷಾ ಹೊಸೂರು ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದ ಟ್ರಕ್ನ್ನುಓವರ್ ಟೇಕ್ ಮಾಡಲು ಹೋಗಿ, ಸ್ಕಿಡ್ ಆಗಿ ಮಗುಚಿ ಬಿದ್ದಿದೆ. ಈ ಅಪಘಾತದಿಂದ ಯಾವುದೇ ಸಾವು-ನೋವು ಆಗಿಲ್ಲ, ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.
ವೈರಲ್ ಆಗಿರುವ ಪೋಸ್ಟ್ನಲ್ಲಿ ಹೀಗೆ ವಿವರಿಸಿಲಾಗಿದೆ. ‘ಆಟೋವೊಂದು ವೇಗವಾಗಿ ಹೋಗಿ ಲಾರಿಯನ್ನುಓವರ್ ಟೇಕ್ ಮಾಡಿದೆ. ಈ ವೇಳೆ ಆಟೋ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಆಟೋ ನಿಯಂತ್ರಣ ಕಳೆದುಕೊಂಡು, ರಸ್ತೆಯಲ್ಲಿ ಪಲ್ಟಿಯಾಗಿ, ಆಟೋ ಚಾಲಕ ಮೇಲೆ ಬಿದ್ದಿದೆ. ಚಾಲಕನಿಗೆ ಯಾವುದೇ ಗಂಭೀರ ಗಾಯಗಳು ಆಗಿಲ್ಲ ಎಂದು ಹೇಳಲಾಗಿದೆ.
ಇದನ್ನೂ ಓದಿ : ದೇಶದಲ್ಲಿ 2 ದಶಕಗಳ ಬಳಿಕ SIR ಪರಿಷ್ಕರಣೆ ; ಕೇಂದ್ರ ಚುನಾವಣಾ ಆಯೋಗ ಘೋಷಣೆ



















