ಬೆಂಗಳೂರು : ಓವರ್ಟೇಕ್ ಮಾಡುವ ಭರದಲ್ಲಿ ಮುಂದೆ ಬರ್ತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಹೊಸಕೋಟೆ ಚಿಂತಾಮಣಿ ರಾಜ್ಯ ಹೆದ್ದಾರಿ (ಮಲ್ಲಿಮಾಕನಪುರ) ಗ್ರಾಮದ ಬಳಿ ನಡೆದಿದೆ. ಮೃತರನ್ನು ಉತ್ತರ ಭಾರತ ಮೂಲದ ಲೊಕೇಶ್ (25) ವಿಮಲ್ (27) ಎಂದು ಗುರುತಿಸಲಾಗಿದೆ.

ಒವರ್ ಟೇಕ್ ಮಾಡುವ ಭರದಲ್ಲಿ ಮುಂದೆ ಬರ್ತಿದ್ದ ಬೃಹತ್ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಓವರ್ಟೇಕ್ ಮಾಡುವ ಭರದಲ್ಲಿ ಬೈಕ್ ನಿಯಂತ್ರಣ ಕಳೆದುಕೊಂಡು ಟಿಪ್ಪರ್‌ಗೆ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಸದ್ಯ ಗಾಯಾಳುವಿಗೆ ಹೊಸಕೋಟೆ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.