ಬೆಂಗಳೂರು: ಬೆಳ್ಳಂಬೆಳಗ್ಗೆ ಕಾರೊಂದು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ನಗರದ ಯಶವಂತಪುರದ ಬಳಿ ಬೆಳಿಗ್ಗೆ 7 ಘಂಟೆಯ ಸುಮಾರಿಗೆ ನಡೆದಿದೆ.
ಯಶವಂತಪುರ ಕಡೆಯಿಂದ ಮಲ್ಲೇಶ್ವರಂ ಸರ್ಕಲ್ ಮಾರಮ್ಮ ದೇವಸ್ಥಾನದ ಕಡೆಗೆ ಹೋಗುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರಿನ ಒಳಬಾಗದಲ್ಲಿ ಹೊಗೆ ಕಾಣಿಸಿ ಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಕೆಳಗಡೆ ಇಳಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಸ್ಥಳಿಯರು ಕೂಡಲೆ ಬೆಂಕಿ ನಂದಿಸುವ ಯಂತ್ರದಿಂದ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಈ ಘಟನೆಯಲ್ಲಿಯಾವುದೇ ಪ್ರಾಣಪಾಯವಾಗಿಲ್ಲ ಎಂದು ತಿಳಿದು ಬಂದಿದೆ. ಸದ್ಯ ಈ ಘಟನಾ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಉಡುಪಿ ಪರ್ಯಾಯಕ್ಕೆ ಹೊರೆಕಾಣಿಕೆಗಳ ಮಹಾಪೂರ | ಈವರೆಗೆ 5 ಸಾವಿರ ಕೆಜಿ ಅಕ್ಕಿ, 40 ಸಾವಿರ ಕೆಜಿ ಬೆಲ್ಲ ಸಂಗ್ರಹ!



















