ಬೆಂಗಳೂರು : ಬನ್ನೇರುಘಟ್ಟ ರಸ್ತೆಯ ಅರಕೆರೆ ಬಳಿ ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್‌ವೊಂದಕ್ಕೆ ಕಾರು ಡಿಕ್ಕಿಯಾದ ಘಟನೆ ಗುರುವಾರ ನಡೆದಿದೆ. ಕಾರಿನ ಚಾಲಕ ಸಿಗ್ನಲ್ ತಪ್ಪಿಸಲು ವೇಗವಾಗಿ ನುಗ್ಗಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಬಸ್‍ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅಲ್ಲದೆ, ಬಸ್’ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಳಿಮಾವು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಯುಗಾರಂಭ | ಅಲೀಸಾ ಹೀಲಿ ಉತ್ತರಾಧಿಕಾರಿಯಾಗಿ ಆರ್ಸಿಬಿ ಆಟಗಾರ್ತಿಗೆ ಪಟ್ಟಾಭಿಷೇಕ!



















