ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ) ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ (Bengaluru City University Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ನಗರ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 10
ಹುದ್ದೆಗಳ ಹೆಸರು: ಲೈಬ್ರರಿ ಅಪ್ರೆಂಟಿಸ್ ಟ್ರೈನಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 20
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸ್ನಾತಕೋತ್ತರ ಪದವಿ, ಎಂ.ಫಿಲ್, ಪಿಎಚ್.ಡಿ, ಸ್ನಾತಕೋತ್ತರ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಸಿಸ್ಟಂಟ್ ಲೈಬ್ರೇರಿಯನ್ ಹಾಗೂ ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 25,500 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ಸೈಟ್ bcu.ac.inಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಕೊನೆಯ ದಿನಾಂಕಕ್ಕೂ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ
ಇದನ್ನೂ ಓದಿ : ಮೊಬೈಲ್ ಗೀಳು, ಸೋಶಿಯಲ್ ಮೀಡಿಯಾ ಹುಚ್ಚಿನಿಂದ ಜನ ಥಿಯೇಟರ್‌ಗೆ ಬರ್ತಿಲ್ಲ | ಸಾಧು ಕೋಕಿಲ



















