ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯದಲ್ಲಿ (ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ) ಖಾಲಿ ಇರುವ 2 ಹುದ್ದೆಗಳ ನೇಮಕಾತಿಗಾಗಿ (Bengaluru City University Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ವಿಶ್ವವಿದ್ಯಾಲಯದಲ್ಲಿ 2 ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ವಿಧಾನ ಸೇರಿ ನೇಮಕಾತಿಗೆ ಸಂಬಂಧಿಸಿದ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ನಗರ ವಿಶ್ವವಿದ್ಯಾಲಯ
ಒಟ್ಟು ಹುದ್ದೆಗಳು: 2
ಹುದ್ದೆಗಳ ಹೆಸರು: ಕೋ-ಆರ್ಡಿನೇಟರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 15
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪದವಿ ಪಡೆದಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bcu.ac.inಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಿ
ಅರ್ಜಿ ಹಾಗೂ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಿ
ಅರ್ಜಿ ಸಲ್ಲಿಸಬೇಕಾದ ವಿಳಾಸ
Board Room, Gyanjyothi Hall, Dr. Manmohan Singh Bangalore City University, Central College Campus, Bangalore-560001.
ಇದನ್ನೂ ಓದಿ : ಐಫೋನ್ ಕೊಂಡುಕೊಳ್ಳೋಕೆ 3 ಲಕ್ಷ ರೂ… ಫೋನ್‌ನಾ ಇದು, ಚಿನ್ನನಾ? ಆ್ಯಪಲ್‌ಗೆ ನೆಟ್ಟಿಗರ ಪಂಚ್



















