ಜೈಪುರ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ ಆಕರ್ಷಕ ಅರ್ಧಶತಕದ ನೆರವಿನಿಂದಾಗಿ ರಾಜಸ್ಥಾನ್ ರಾಯಲ್ಸ್ (Rajasthan Royals) ತವರಲ್ಲಿ ಮುಗ್ಗರಿಸಿದೆ. ಬೆಂಗಳೂರು (Royal Challengers Bengaluru) ತಂಡ ಮತ್ತೆ ಗೆಲುವಿನ ಹಾದಿಗೆ ಮರಳಿದೆ.
ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಗುರಿ ಬೆನ್ನಟ್ಟಿದ ಆರ್‌ಸಿಬಿ 17.3 ಓವರ್ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಗುರಿ ತಲುಪುವಲ್ಲಿ ಯಶಸ್ವಿಯಾಯಿತು.
ಆರ್ ಆರ್ ಆರಂಭದಲ್ಲಿ ಉತ್ತಮ ಬ್ಯಾಟಿಂಗ್ ಮುಂದುವರೆಸಿತು. ಯಶಸ್ವಿ ಜೈಸ್ವಾಲ್ ಅರ್ಧಶತಕ (75 ರನ್, 47 ಬಾಲ್, 10 ಫೋರ್, 2 ಸಿಕ್ಸರ್) ಗಳಿಸಿದರು. ರಿಯಾನ್ ಪರಾಗ್ 30, ಧ್ರುವ್ ಜುರೇಲ್ 35, ಸಂಜು ಸ್ಯಾಮ್ಸನ್ 15 ರನ್ ಗಳಿಸಿದರು.ಆರ್‌ಸಿಬಿ ಪರ ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಕೃಣಾಲ್ ಪಾಂಡ್ಯ ತಲಾ 1 ವಿಕೆಟ್ ಪಡೆದು ಮಿಂಚಿದರು.
ಆರ್‌ಆರ್ ನೀಡಿದ 174 ರನ್ ಗುರಿ ಬೆನ್ನತ್ತಿದ ಆರ್‌ಸಿಬಿ ಸುಲಭ ಗೆಲುವು ಕಂಡಿತು. ಸಾಲ್ಟ್ ಮತ್ತು ಕೊಹ್ಲಿ ಜೋಡಿ ತಂಡಕ್ಕೆ ಗೆಲುವು ತಂದು ಕೊಟ್ಟಿತು. ಸಾಲ್ಟ್ 65, ಕೊಹ್ಲಿ 62, ಪಡಿಕ್ಕಲ್ 40 ರನ್ ಗಳಿಸಿದರು.