ಬೆಂಗಳೂರು ಗ್ರಾಮಾಂತರ: ಕಾಲೇಜು ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊರವಲಯದ ಹೆಸರುಘಟ್ಟ ರಸ್ತೆಯ ಪಿಜಿಯೊಂದರಲ್ಲಿ ನಡೆದಿದೆ.
ಹಾಸನ ಮೂಲದ ಯುವತಿ ವತ್ಸಲ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ವ್ಯಾಸಂಗ ಮಾಡುತ್ತಿದ್ದಳು. ಗರ್ಲ್ಸ್ ಪಿಜಿಯಲ್ಲಿದ್ದ ವಿದ್ಯಾರ್ಥಿನಿ ಇಂದು ಮಧ್ಯಾಹ್ನ 2:30 ಕ್ಕೆ ನೇಣಿಗೆ ಶರಣಾಗಿದ್ದಾಳೆ. ಯುವತಿ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ.
ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಆಕೆಯ ಸ್ನೇಹಿತರು ಹಾಗೂ ಮೊಬೈಲ್ ಫೋನ್ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಕೊಂದು ಜೈಲು ಪಾಲಾದ ಗಂಡ | ತಬ್ಬಲಿಯಾದ ಮಕ್ಕಳು



















