ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಲ್ಲಿ ಒಂದಾಗಿರುವ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Bengaluru East Municipal Corporation Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಪಾಲಿಕೆಯ ಕಾನೂನು ಕೋಶದ ಮುಖ್ಯಸ್ಥರ ಕಚೇರಿಯಲ್ಲಿ ಲೀಗಲ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ
ಒಟ್ಟು ಹುದ್ದೆಗಳು: ವಿವಿಧ
ಹುದ್ದೆಗಳ ಹೆಸರು: ಲೀಗಲ್ ಅಸಿಸ್ಟಂಟ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 5
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಲ್ ಎಲ್ ಬಿ ಪದವಿ ಮುಗಿಸಿರಬೇಕು. ವಕೀಲರಾಗಿ ಕಾರ್ಯನಿರ್ವಹಿಸುವವರೂ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಲಾಗಿದೆ. ಸಂಸ್ಥೆಯಲ್ಲಿ 11 ತಿಂಗಳ ಅವಧಿಗಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ bbmp.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಓದಿಕೊಳ್ಳಬೇಕು. ಅರ್ಜಿಯ ಪ್ರಿಂಟೌಟ್ ತೆಗೆದುಕೊಂಡು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ಆಯುಕ್ತರು, ಬೆಂಗಳೂರು ಪೂರ್ವ ನಗರ ಪಾಲಿಕೆ, ಆರ್ ಎಚ್ ಬಿ ಕಾಲೋನಿ, ಐಟಿಪಿಎಲ್ ಮುಖ್ಯರಸ್ತೆ, ಫಿನಿಕ್ಸ್ ಮಾಲ್ ಎದುರು, ಬೆಂಗಳೂರು -560048
ಇದನ್ನೂ ಓದಿ : ನೀವು ಈ ಕೆಲಸ ಮಾಡದಿದ್ದರೆ PF ಹಣ ವಿತ್ ಡ್ರಾ ಮಾಡಲು ಆಗಲ್ಲ : ಏನಿದು ಗೊತ್ತಾ?



















