ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಬರುವ 5 ಮಹಾನಗರ ಪಾಲಿಕೆಗಳಲ್ಲಿ ಒಂದಾಗಿರುವ ಬೆಂಗಳೂರು ಪೂರ್ವ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 1,000 ಹುದ್ದೆಗಳ ನೇಮಕಾತಿಗಾಗಿ (Bengaluru East Municipal Corporation Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 1 ಸಾವಿರ ಗಣತಿದಾರರ (Census Taker/ Census Enumerator) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಶುಕ್ರವಾರ ಅಂದರೆ, ಏಪ್ರಿಲ್ 24ರಂದೇ ಸಂದರ್ಶನ ನಡೆಯಲಿದ್ದು, ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮೂಲಕ ಉದ್ಯೋಗ ಗಿಟ್ಟಿಸಿಕೊಳ್ಳಬಹುದು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ
ಹುದ್ದೆ ಹೆಸರು: ಗಣತಿದಾರ
ಒಟ್ಟು ಹುದ್ದೆ: 1,000
ಉದ್ಯೋಗ ಸ್ಥಳ: ಬೆಂಗಳೂರು
ಸಂದರ್ಶನದ ದಿನಾಂಕ: ಏಪ್ರಿಲ್ 24
ನೇಮಕಾತಿ ಹೊಂದಿದವರಿಗೆ ಮಾಸಿಕ 16 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಪಿಯುಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ bbmp.gov.in ಗೆ ಭೇಟಿ ನೀಡಬೇಕು. ಅಧಿಸೂಚನೆಯಲ್ಲಿ ತಿಳಿಸಿದ ನಿಗದಿತ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಗಳಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಸಂದರ್ಶನ ನಡೆಯುವ ಸ್ಥಳ
ನ್ಯೂ ಹಾರಿಜನ್ ಕಾಲೇಜ್ ಆಫ್ ಎಂಜಿನಿಯರಿಂಗ್, ಹೊರ ವರ್ತುಲ ರಸ್ತೆ, ಮಾರತಹಳ್ಳಿ ಹತ್ತಿರ, ಕಾಡುಬೀಸನಹಳ್ಳಿ, ಬೆಂಗಳೂರು-560103.
ಇದನ್ನೂ ಓದಿ : ಮಾವಿನಕಾಯಿ ಕೊಯ್ಯುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು!


















