ಬೆಂಗಳೂರು : ಬೆಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್‌ಪೆಕ್ಟರ್ ಶಿವಪ್ಪ ನಾಯಕರ್ (56) ಹೃದಯಾಘಾತದಿಂದ ನಿಧನರಾಗಿದ್ದಾರೆ.
2010 ಬ್ಯಾಚ್ ಅಧಿಕಾರಿಯಾಗಿದ್ದ ಶಿವಪ್ಪ ನಾಯಕರ್ ಅವರು ತಮ್ಮ ಕರ್ತವ್ಯನಿಷ್ಠೆ ಹಾಗೂ ಸರಳ ಸ್ವಭಾವದಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
ಸದ್ಯ ಸಿಟಿ ಎಸ್‌ಬಿ ವಿಭಾಗದಲ್ಲಿ ಇನ್ಸ್‌ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಪ್ಪ ನಾಯಕರ್ ಅವರಿಗೆ ನಿನ್ನೆ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸೋಮಹಟ್ಟಿ ಗ್ರಾಮದವರಾಗಿದ್ದ ಶಿವಪ್ಪ ನಾಯಕರ್ ಅವರು ಹಲವು ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಅಕಾಲಿಕ ನಿಧನಕ್ಕೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬಂಧುಬಳಗದವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಟಿಬಿ ಡ್ಯಾಂ ಬಳಿ ದುರಂತ ; ಸೇತುವೆ ಮೇಲಿಂದ ಟ್ರ್ಯಾಕ್ಟರ್ ಬಿದ್ದು 7 ಮಂದಿ ದುರ್ಮರಣ.. ಹಲವರ ಸ್ಥಿತಿ ಗಂಭೀರ!


















