ಬೆಂಗಳೂರು: ಬೆಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಡ್ರಗ್ಸ್ ದಂಧೆ ತಡೆಗಟ್ಟುವ ದೃಷ್ಟಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸಾರ್ವಜನಿಕರೂ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮನವಿ ಮಾಡಿದ್ದಾರೆ.
ಆರ್‌ವಿ ಡೆಂಟಲ್ ಕಾಲೇಜಿನಲ್ಲಿ ಆಯೋಜಿಸಿದ್ದ ಬೆಂಗಳೂರಿನ ದಕ್ಷಿಣ ವಿಭಾಗದ ಮಾಸಿಕ ಜನ ಸಂಪರ್ಕ ಸಭೆ ಹಾಗೂ ಸಂಚಾರ ಸಂಪರ್ಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬೇರೆ ಬೇರೆ ಇಲಾಖೆಗಳ ಜೊತೆಗೆ ಮಾಸಿಕವಾಗಿ ಸಭೆ ನಡೆಸುತ್ತೇವೆ. ಎಲ್ಲ ಇಲಾಖೆಯವರೂ ಗಮನವಿಟ್ಟು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು ದಕ್ಷಿಣ ಭಾಗದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಬೆಂಗಳೂರಿನಲ್ಲಿ 10 ಸಾವಿರಕ್ಕಿಂತ ಹೆಚ್ಚಿನ ಕ್ಯಾಮೆರಾಗಳು ಇವೆ. ಪೊಲೀಸರು ಇದರ ಮೇಲೆ ನಿಗಾ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ 6 ಲಕ್ಷಕ್ಕಿಂತ ಹೆಚ್ಚಿನ ಸಿಸಿ ಕ್ಯಾಮೆರಾಗಳಿದ್ದು, ಇದರ ಡೇಟಾ ಇದೆ. ಇದು ಆಯಾ ಪ್ರದೇಶಗಳಲ್ಲಿ ನಡೆಯುವ ಅಪರಾಧ ತಡೆಗಟ್ಟಲು ಸಹಾಯ ಮಾಡಿಕೊಡುತ್ತದೆ. ಬೆಂಗಳೂರು ನಗರದಲ್ಲಿ 185 ಪೊಲೀಸ್ ಠಾಣೆಗಳಿವೆ. ಇನ್ನು ಝೂಮ್ಯಾಟೋ, ಸಿಗ್ವಿ ಸೇರಿ ಗಿಗ್ ನೌಕರರ ವೆರಿಫಿಕೇಷನ್ ಬಗ್ಗೆ ಸ್ವಲ್ಪ ಸಮಸ್ಯೆಗಳನ್ನು ಪರಿಶೀಲಿಸಲಾಗುವುದು ಎಂದಿದ್ದಾರೆ.