ಬೆಂಗಳೂರು: ಬೆಂಗಳೂರಿನ ಮೆಟ್ರೋಗೆ ವಾಲ್ಮೀಕಿ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದ್ದಾರೆ.
ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಬೆಂಗಳೂರು ಮೆಟ್ರೋಗೆ ವಾಲ್ಮಿಕಿ ಹೆಸರಿಡಲು ನಮ್ಮಿಂದ ಆಗುವುದಿಲ್ಲ. ಕೇಂದ್ರ ಮತ್ತು ರಾಜ್ಯ ಎರಡೂ ಮೆಟ್ರೋವನ್ನು ನಡೆಸುತ್ತಿವೆ. ಹೀಗಾಗಿ ನಾನು ಅದನ್ನು ಶಿಫಾರಸು ಮಾಡುತ್ತೇನೆ ಎಂದಿದ್ದಾರೆ.
ಪಠ್ಯಪುಸ್ತಕಗಳಲ್ಲಿ ವಾಲ್ಮೀಕಿ ಮತ್ತು ರಾಮಾಯಣವನ್ನು ಸೇರಿಸುವ ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಅವರ ಸಲಹೆಯನ್ನು ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು. ವಾಲ್ಮೀಕಿ ಭವನ ನಿರ್ಮಿಸಲು ಎರಡು ಎಕರೆ ಭೂಮಿಯನ್ನು ನೀಡಲಾಗಿದ್ದು, ಯೋಜನೆಗೆ ಅಗತ್ಯವಾದ ಹಣವನ್ನು ಮುಂದಿನ ವರ್ಷದ ಬಜೆಟ್‌ನಲ್ಲಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ.