ಬೆಂಗಳೂರು: ಕೋಲಾರದ ಟಮಕಾದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ (Bengaluru North University Recruitment 2025) ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಸಿಸ್ಟಂಟ್ ಲೈಬ್ರೇರಿಯನ್, ಫಿಸಿಕಲ್ ಡೈರೆಕ್ಟರ್, ಸಿಸ್ಟಮ್ ಅನಾಲಿಸ್ಟ್, ಕಂಪ್ಯೂಟರ್ ಪ್ರೋಗ್ರಾಮರ್ ಹಾಗೂ ನೋಡಲ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ರಾಯಚೂರು ಮತ್ತು ಕೊಪ್ಪಳ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು: ಅಸಿಸ್ಟಂಟ್ ಲೈಬ್ರೇರಿಯನ್ ಇತ್ಯಾದಿ
ಒಟ್ಟು ಹುದ್ದೆಗಳು: 05
ಉದ್ಯೋಗ ಸ್ಥಳ: ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 30
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ, ಬಿ.ಟೆಕ್, ಎಂಪಿಇಡಿ, ಎಂ.ಎಲ್.ಐ.ಬಿ, ಎಂ.ಎಲ್.ಐ.ಎಸ್.ಸಿ, ಪಿಎಚ್.ಡಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸಲು ಬಯಸುವ ಜನರಲ್ ಅಭ್ಯರ್ಥಿಗಳಿಗೆ 500 ರೂ., ಒಬಿಸಿಯವರಿಗೆ 250 ರೂ. ಹಾಗೂ ಎಸ್ಸಿ, ಎಸ್ಟಿಯವರಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://bnu.karnataka.gov.in/ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಅಧಿಸೂಚನೆ ಓದಿಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ನಿಗದಿತ ದಿನಾಂಕದೊಳಗೆ The Registrar, Bengaluru North University, Tamaka, Kolar – 563103 ವಿಳಾಸಕ್ಕೆ ಪೋಸ್ಟ್ ಮಾಡಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 30 ಸಾವಿರ ರೂ.ನಿಂದ 41 ಸಾವಿರ ರೂ.ವರೆಗೆ ಸಂಬಳ ನೀಡಲಾಗುತ್ತದೆ.
ಇದನ್ನೂ ಓದಿ: ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆಯಲ್ಲಿ 3 ಹುದ್ದೆ : ನೇರ ಸಂದರ್ಶನದ ದಿನಾಂಕ ಇಲ್ಲಿದೆ



















