ಬೆಂಗಳೂರು | ಕಳೆದ ಒಂದು ವಾರದಿಂದ ನಗರದಲ್ಲಿ ಪೊಲೀಸರು ಕಾರ್ಯಚರಣೆ ನಡೆಸಿ 200ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಪತ್ತೆ ಹಚ್ಚಿದ್ದಾರೆ. ನಗರ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಸಿಸಿಬಿ ಹಾಗೂ ನಗರದ 11 ಡಿಸಿಪಿ ವ್ಯಾಪ್ತಿಯ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಕಳೆದ ಒಂದು ವಾರದಿಂದ ನಗರದಲ್ಲಿ ಕಾರ್ಯಚರಣೆ ನಡೆಸಿದ ಪೊಲೀಸರು, ಅಕ್ರಮವಾಗಿ ವಾಸ ಮಾಡುವವರು ವಿರುದ್ದ ಕ್ರಮ ಕೈಗೊಂಡಿದ್ದಾರೆ. ನಿನ್ನೆ ಸಿಸಿಬಿ ಪೊಲೀಸರಿಂದ ಬೃಹತ್ ಮಟ್ಟದ ಕಾರ್ಯಾಚರಣೆ ನಡೆದಿದ್ದು, ಒಂದೇ ದಿನದಲ್ಲಿ 100ಕ್ಕೂ ಅಧಿಕ ಅಕ್ರಮ ವಲಸಿಗರು ಪತ್ತೆಯಾಗಿದ್ದಾರೆ.
ಒಟ್ಟು ನಗರದಾದ್ಯಂತ 200ಕ್ಕೂ ಹೆಚ್ಚು ಅಕ್ರಮ ವಾಸ ಮಾಡ್ತಿದ್ದವರು ಪತ್ತೆಯಾಗಿದ್ದು, ಎಲ್ಲರನ್ನೂ FRRO ವಶಕ್ಕೆ ನೀಡಲಾಗಿದೆ. ಅಕ್ರಮವಾಗಿ ವಾಸಿಸುತ್ತಿದ್ದವರಲ್ಲಿ ಬಾಂಗ್ಲಾದೇಶದ ಜನರೇ ಹೆಚ್ಚಿದ್ದಾರೆ ಎಂದು ತಿಳಿದುಬಂದಿದೆ. ಬಾಂಗ್ಲಾ, ಆಫ್ರಿಕಾ ಸೇರಿದಂತೆ ಹಲವು ದೇಶಗಳಿಂದ ಬಂದು ಬೆಂಗಳೂರಲ್ಲಿ ವಾಸಿಸುತ್ತಿದ್ದರು. ಕೆಲವರ ಬಳಿ ನಕಲಿ ಆಧಾರ್ ಕಾರ್ಡ್ ಸೇರಿದಂತೆ ಸ್ಥಳೀಯ ದಾಖಲೆಗಳು ಸಹ ಪತ್ತೆಯಾಗಿದೆ.
ಸದ್ಯ ಯಾವ ಯಾವ ದೇಶವರು ಪತ್ತೆಯಾಗಿದ್ದಾರೆ ಅಲ್ಲಿಗೆ ಮಾಹಿತಿ ರವಾನಿಸಲಾಗ್ತಿದೆ. ಆ ದೇಶದ ಅಧಿಕಾರಿಗಳಿಂದಲೂ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಇನ್ನು ಮುಂದೆಯೂ ಕಾರ್ಯಾಚರಣೆ ನಡೆಸಲಿರೋ ನಗರ ಪೊಲೀಸರು, FRRO ಮುಖಾಂತರ ಈಗಾಗಲೇ ವಶಕ್ಕೆ ಪಡೆದವರ ವಿರುದ್ದ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ : ಸಾಲ ಮಾಡದೇ ಯಾವ ದೇಶ, ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ – ಸಿಎಂ ಸಿದ್ದರಾಮಯ್ಯ



















