ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ನಗರವು ತಡರಾತ್ರಿ ಗುಡುಗು ಸಹಿತ ಭಾರಿ ಮಳೆಗೆ ಸಾಕ್ಷಿಯಾಗಿದೆ.
ನಿನ್ನೆ ರಾತ್ರಿಯಿಂದ ಪ್ರಾರಂಭವಾದ ಮಳೆಯ ಆರ್ಭಟ ಇಂದು ಬೆಳಿಗ್ಗೆಯೂ ಮುಂದುವರಿದಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ರಾಜಧಾನಿಯಾದ್ಯಂತ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದೆ.
ಶಾಂತಿನಗರ, ವಸಂತನಗರ, ಸಂಜಯನಗರ ಕಾರ್ಪೊರೇಷನ್ ಪ್ರದೇಶ, ಮೆಜೆಸ್ಟಿಕ್, ಕೋರಮಂಗಲ, ಸಿಟಿ ಮಾರ್ಕೆಟ್, ಮಲ್ಲೇಶ್ವರಂ, ಯಶವಂತಪುರ, ಜಯನಗರ, ವಿಜಯನಗರ, ಜೆ.ಪಿ. ನಗರ, ರಾಜಾಜಿನಗರ, ಚಂದ್ರಾಲೇಔಟ್, ನಾಗರಬಾವಿ, ಸುಂಕದಕಟ್ಟೆ, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ ಮತ್ತು ಹೆಬ್ಬಾಳ ಸೇರಿದಂತೆ ಹಲವು ಪ್ರಮುಖ ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ. ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.
ಇದನ್ನೂ ಓದಿ : ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್


















