ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆರಾಯ ಬೆಂಬಿಡದೆ ಸುರಿಯುತ್ತಿದ್ದಾನೆ. ಇದಕ್ಕೆ ಬೆಂಗಳೂರು ಕೂಡ ಹೊರತಲ್ಲ. ಈಗ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂದಿನ ಮೂರ್ನಾಲ್ಕು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೂಡ ನಗರದ ಬಹುತೇಕ ಕಡೆ ವ್ಯಾಪಕ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ.
ಕರಾವಳಿ ಕರ್ನಾಟಕದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ವ್ಯಾಪಕ ಮಳೆ ಸುರಿಯುವ ಸಾಧ್ಯತೆ ಇದೆ. ಅಲ್ಲದೇ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.