ಬೆಂಗಳೂರು: ನಗರದ ಇಂದಿರಾನಗರ ವ್ಯಾಪ್ತಿಯ ದೂಪನಹಳ್ಳಿಯಲ್ಲಿ ಮಗನಿಂದಲೇ ತಂದೆಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಮುನಿಕೃಷ್ಣ (70) ಮೃತಪಟ್ಟ ವ್ಯಕ್ತಿಯಾಗಿದ್ದು, ಆಸ್ತಿ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರ ಮೋಹನ್ ಕುಮಾರ್ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ದಿನಗಳ ಹಿಂದೆ ಮನೆಯಲ್ಲಿ ಗಲಾಟೆ ನಡೆಯುತ್ತಿದ್ದ ವೇಳೆ ಮೋಹನ್ ಕುಮಾರ್ ತಂದೆಗೆ ಚಾಕು ಇರಿದಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮುನಿಕೃಷ್ಣರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗೆ ಅವರು ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಲ್ಲಿ ಕೋಮು ಘರ್ಷಣೆ | ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟ


















