ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಪೌರ ಕಾರ್ಮಿಕರ ನೇಮಕಾತಿಗಾಗಿ (Bengaluru South Municipal Corporation Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 102 ಪೌರ ಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ
ಹುದ್ದೆ ಹೆಸರು: ಪೌರ ಕಾರ್ಮಿಕರು
ಒಟ್ಟು ಹುದ್ದೆ: 102
ಉದ್ಯೋಗ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 5
ರಾಮನಗರ, ಚನ್ನಪಟ್ಟಣ, ಕನಕಪುರ ನಗರಸಭೆಗಳಲ್ಲಿ ಕೆಲಸ ಮಾಡಲು ಇಚ್ಛಿಸಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಲ್ಲಿ ಒಂದಾಗಿದೆ. ರಾಮನಗರ, ಚನ್ನಪಟ್ಟಣ, ಕನಕಪುರ ನಗರಸಭೆ ಕಚೇರಿಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bengalurusouth.nic.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಮೇಲೆ ನೀಡಿದ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಇದನ್ನೂ ಓದಿ : “ಎಲ್ಲಾ ಸವಾಲುಗಳಿಗೂ ಸಿದ್ಧರಾಗಿರಿ” : ಲಂಕಾ ಟೆಸ್ಟ್ ಸರಣಿಗೂ ಮುನ್ನ ಆಟಗಾರರಿಗೆ ಗಂಭೀರ್ ಖಡಕ್ ಎಚ್ಚರಿಕೆ



















