ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ಬರುವ ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ (Bengaluru South Municipal Corporation Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ವಿವಿಧ ಮುಖ್ಯಸ್ಥರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ
ಹುದ್ದೆ ಹೆಸರು: ಮುಖ್ಯಸ್ಥರು
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಜನವರಿ 20
ಅರ್ಜಿ ಸಲ್ಲಿಸಲು ಬಯಸುವವರಿಗೆ ಗರಿಷ್ಠ 65 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ ಒಂದು ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆಯು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ಪಾಲಿಕೆಗಳಲ್ಲಿ ಒಂದಾಗಿದೆ. ಇದು ಬಿಟಿಎಂ ಲೇಔಟ್, ಜಯನಗರ, ಬೊಮ್ಮನಹಳ್ಳಿ ಸೇರಿದಂತೆ ಹಲವು ಭಾಗಗಳನ್ನು ಒಳಗೊಂಡಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ bengalurusouth.nic.inಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಗೆ ಸಂಬಂಧಿಸಿದ ಅಧಿಸೂಚನೆ ಓದಬೇಕು
ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು
ಅರ್ಜಿ ಸಲ್ಲಿಸಬೇಕಾದ ವಿಳಾಸ
The Honorable Commissioner, Bangalore South Municipal Corporation, Municipal Office Complex, 2nd Floor, 9th Main Road, 9th Cross Road, 2nd Block Jayanagar, Bangalore-560011
ಇದನ್ನೂ ಓದಿ : ನಿಮ್ಹಾನ್ಸ್ ಸಂಸ್ಥೆಯಲ್ಲಿ ಫೀಲ್ಡ್ ಆಫೀಸರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ



















