ಬೆಂಗಳೂರು: ಜಮ್ಮುಕಾಶ್ಮೀರದಲ್ಲಿ (Jammu And Kashmir) ಮಂಗಳವಾರ ನಡೆದ ಭೀಕರ ಉಗ್ರರ ಅಟ್ಟಹಾಸಕ್ಕೆ ಬೆಂಗಳೂರು (Bengaluru) ಮೂಲದ ಟೆಕ್ಕಿ (Techie) ಭರತ್ ಭೂಷಣ್ ಕೂಡ ಪ್ರಾಣ ಚೆಲ್ಲಿದ್ದಾರೆ.
ಆನಂತನಾಗ್ ಜಿಲ್ಲೆಯ ಪಹಲ್ಗಾಮ್ನಲ್ಲಿ ನಡೆದ ಉಗ್ರರ ಅಟ್ಟಹಾಸಕ್ಕೆ (Pahalgam Terrorist Attack) ಸಾವನ್ನಪ್ಪಿದವರ ಸಂಖ್ಯೆ ಏರುತ್ತಿದೆ. ಬೆಂಗಳೂರು ಮೂಲದ ಟೆಕ್ಕಿ ಭರತ್ ಭೂಷಣ್ ಕೂಡ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದರು.
ಭರತ್ ಭೂಷಣ್, ಪತ್ನಿ, ಹಾಗೂ ಮೂರು ವರ್ಷದ ಮಗ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ನಾಲ್ಕೈದು ದಿನಕ್ಕೆ ಪ್ರವಾಸಕ್ಕೆ ತೆರಳಿದ್ದ ಕುಟುಂಬ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಮರಳಬೇಕಿತ್ತು. ಆದರೆ, ಮಂಗಳವಾರ ರಾತ್ರಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಭರತ್ ಬಲಿಯಾಗಿದ್ದಾರೆ.
ಮಂಗಳವಾರ ಮಧ್ಯಾಹ್ನ ಏಕಾಏಕಿ ಉಗ್ರರ ದಾಳಿ ನಡೆದಿದೆ. ಈ ವೇಳೆ ದಾಳಿಯಾದ ಸ್ಥಳದಲ್ಲೇ ಇದ್ದ ಭೂಷಣ್ ಕುಟುಂಬ, ದಾಳಿಯಿಂದ ತಪ್ಪಿಸಿಕೊಳ್ಳಲು ಓಡಿಹೋಗಿದ್ದಾರೆ. ಅಲ್ಲೇ ಇದ್ದ ಮರವೊಂದರ ಬಳಿ ಮಗು ಜೊತೆ ಅವಿತುಕುಳಿತಿದ್ದ ಭರತ್ ಭೂಷಣ್ಗೆ ಉಗ್ರರು ನೇರ ಶೂಟ್ ಮಾಡಿದ್ದಾರೆ. ಬುಲೆಟ್ ನೇರ ಭೂಷಣ್ ತಲೆಗೆ ಬಿದ್ದಿದ್ದು, ಸ್ಥಳದಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.