ಬೆಂಗಳೂರು: ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿಯಾಗಿರುವ ಘಟನೆ ನಗರದ ಹೊಸಕೆರೆಹಳ್ಳಿ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.
ಯಾದಗಿರಿ ಮೂಲದ ರಂಗಮ್ಮ (45) ಹಾಗೂ ಚೌಡಮ್ಮ (55) ಮೃತ ಕಾರ್ಮಿಕರು. ಇಬ್ಬರು ಕಾರ್ಮಿಕರು ದಿನಗೂಲಿ ಕೆಲಸ ಮಾಡಿಕೊಂಡಿದ್ದರು. ಶನಿವಾರ (ಡಿ.12) ಸಂಜೆ 5:55ರ ಸುಮಾರಿಗೆ ನೈಸ್ ರಸ್ತೆಯ ಪಕ್ಕದಲ್ಲಿರುವ ಹುಲ್ಲು ತೆರವು ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಇಬ್ಬರನ್ನು ಗುದ್ದಿಕೊಂಡು ಹೋಗಿದೆ. ಕಾರು ಗುದ್ದಿದ ರಭಸಕ್ಕೆ ಇಬ್ಬರು ಹಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಕಾರು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಅಪಘಾತ ಸಂಬಂಧ ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ಮೈಸೂರು ಝೂನಲ್ಲೇ ಹುಟ್ಟಿ ಬೆಳೆದ ಜಿರಾಫೆಗೆ ಈಗ 25 ವರ್ಷ | ‘ಯುವರಾಜ’ನ ಬರ್ತ್‌ಡೇ ಸೆಲೆಬ್ರೇಷನ್ ಹೇಗಿತ್ತು ನೋಡಿ!



















