ಬೆಂಗಳೂರಿನಲ್ಲಿ ಯುವತಿ ನೇಣಿಗೆ ಶರಣಾಗಿರುವ ಘಟನೆಯೊಂದು ನಡೆದಿದೆ.
ರುಚಿತಾ(25) ಆತ್ಮಹತ್ಯೆಗೆ ಶರಣಾಗಿರುವ ಯುವತಿ. ಬಾಗಲಗುಂಟೆಯ ಮಲ್ಲಸಂದ್ರದಲ್ಲಿ ಈ ಘಟನೆ ನಡೆದಿದೆ. ಡಿ. 31ರಂದು ರಾತ್ರಿ ರುಚಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಚಿತಾ ಬಯೋಕಾನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಆದರೆ, ಅವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.