ಬೆಂಗಳೂರು | ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಫ್ರೀಡಂ ಪಾರ್ಕ್‌ನಲ್ಲಿ ಇಂದು ಬೃಹತ್ ಪ್ರತಿಭಟನೆ ಹಿನ್ನೆಲೆ ಶೇಷಾದ್ರಿ ರಸ್ತೆಯ ಮೂಲಕ ಜನರು ಮತ್ತು ವಾಹನಗಳು ಹೆಚ್ಚಾಗಿ ಆಗಮಿಸುವ ಕಾರಣ ಫ್ರೀಡಂ ಪಾರ್ಕ್ ಸುತ್ತ ಮುತ್ತ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಫ್ರೀಡಂಪಾರ್ಕ್ ಸುತ್ತಮುತ್ತ ತಾತ್ಕಾಲಿಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ತಾತ್ಕಾಲಿಕ ಸಂಚಾರ ನಿರ್ಬಂಧ
ಶಾಂತಲಾ ಜಂಕ್ಷನ್ ಮತ್ತು ಖೋಡ್ಸೆ ಸರ್ಕಲ್‌ನಿಂದ ಆನಂದರಾವ್ ಮೇಲ್ಸೇತುವೆ, ಹಳೇ ಜೆಡಿಎಸ್ ಕಚೇರಿ ಕ್ರಾಸ್ ಮತ್ತು ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್‌ವರೆಗೆ.
ಪರ್ಯಾಯ ಮಾರ್ಗಗಳು
ಲುಲು ಮಾಲ್, ಕೆಎಫ್‌ಎಂ, ರಾಜೀವ್ ಗಾಂಧಿ ಸರ್ಕಲ್, ಮಂತ್ರಿ ಮಾಲ್, ಸ್ವಸ್ತಿಕ್ ಸರ್ಕಲ್, ಶೇಷಾದ್ರಿಪುರ, ನೆಹರು ಸರ್ಕಲ್, ರೇಸ್ ಕೋರ್ಸ್ ಮೇಲ್ಸೇತುವೆಯಿಂದ ಸಾಗುವುದು. ಮೈಸೂರು ಬ್ಯಾಂಕ್ ಕಡೆಯಿಂದ ಚಾಲುಕ್ಯ ಸರ್ಕಲ್ ಕಡೆಗೆ ಸಾಗುವ ವಾಹನಗಳು ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿಬಿ ರಸ್ತೆ, ಕೆಎಫ್ಎಂ. ರಾಜೀವ್ ಗಾಂಧಿ ಸರ್ಕಲ್, ಸ್ವಸ್ತಿಕ್, ನೆಹರು ಸರ್ಕಲ್, ರೇಸ್ ಕೋರ್ಸ್ ಪ್ರೈ ಓವರ್ ರಸ್ತೆ ಮೂಲಕ ಸಂಚರಿಸುವುದು.
ಚಾಲುಕ್ಯ ಸರ್ಕಲ್‌ನಿಂದ ಮೈಸೂರು ಬ್ಯಾಂಕ್ ಕಡೆಗೆ ಸಾಗುವ ವಾಹನಗಳು ಚಾಲುಕ್ಯ ಸರ್ಕಲ್, ರಾಜಭವನ ರಸ್ತೆ, ಇನ್ ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್ ನಿಂದ ತೆರಳುವುದು. ಕಾಳಿದಾಸ ರಸ್ತೆ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ ಸಾಗುವ ವಾಹನಗಳು ಕನಕದಾಸ ಜಂಕ್ಷನ್ ಬಲ ತಿರುವು ಪಡೆದು ಸಾಗರ ಜಂಕ್ಷನ್ ಕಡೆ ತೆರಳಬೇಕು. ಸುಬ್ಬಣ್ಣ ಜಂಕ್ಷನ್ ನಿಂದ ಬಲ ತಿರುವು ಆನಂದ್ ರಾವ್ ಸರ್ಕಲ್.
ಇದನ್ನೂ ಓದಿ : ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಮೇಲೆ ಫೈರಿಂಗ್.. ಶಾಕಿಂಗ್ ವಿಡಿಯೋ ವೈರಲ್!


















