ಹುಬ್ಬಳ್ಳಿ: ಧಾರವಾಡ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಬೆಣ್ಣೆ ಹಳ್ಳ ತುಂಬಿ ಹರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಹಳ್ಳ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣೆ ಹಳ್ಳದಲ್ಲಿ ಸಿಲುಕಿಕೊಂಡಿದ್ದ ಮೂರು ಜನರ ಕುರಿಗಾಹಿಗಳನ್ನು ರಕ್ಷಣೆ ಮಾಡಲಾಗುತ್ತಿದೆ. ಕುರಿಗಳ ರಕ್ಷಣೆಗೆ ಅಗ್ನಿಶಾಮಕ ಸಿಬ್ಬಂದಿ ಪ್ರಯತ್ನಿಸಿದೆ. ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್ ಜೆ.ಬಿ. ಮಜ್ಜಿಗೆ ಅವರು ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಕುರಿಗಾಹಿಗಳನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ.