ಬೆಂಗಳೂರು: ನೀವು ಈಗಷ್ಟೇ ಡಿಪ್ಲೋಮಾ, ಡಿಗ್ರಿ, ಎಂಜಿನಿಯರಿಂಗ್ ಕೋರ್ಸ್ ಮುಗಿಸಿದ್ದೀರಾ? ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ತರಬೇತಿ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಹೌದು, ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿ (BESCOM Recruitment 2026) ಖಾಲಿ ಇರುವ 520 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ
ಒಟ್ಟು ಹುದ್ದೆಗಳು : 520
ಹುದ್ದೆ ಹೆಸರು: ಅಪ್ರೆಂಟಿಸ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮಾರ್ಚ್ 2
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ, ಪದವಿ,ಬಿಇ ಅಥವಾ ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗ್ರ್ಯಾಜುಯೇಟ್ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿರುವುದಿಲ್ಲ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಈಗಷ್ಟೇ ಕೋರ್ಸ್ ಮುಗಿಸಿದವರು ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಇದು ಒಳ್ಳೆಯ ಅವಕಾಶವಾಗಿದೆ. ನೇಮಕಾತಿ ಹೊಂದಿದವರಿಗೆ ತರಬೇತಿ ಅವಧಿಯಲ್ಲಿಯೇ 9 ಸಾವಿರ ರೂಪಾಯಿ ಸ್ಟೈಪೆಂಡ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು bescom.karnataka.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅರ್ಜಿ ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ: ಕೇಂದ್ರ ಸರ್ಕಾರದ BECIL ಸಂಸ್ಥೆಯಲ್ಲಿ 154 ಹುದ್ದೆಗಳ ನೇಮಕಾತಿ | 1 ಲಕ್ಷ ಸಾವಿರ ರೂಪಾಯಿ ಸಂಬಳ



















