ಬೆಂಗಳೂರು: ಆನ್‌ಲೈನ್ ಹಾಗೂ ಆಫ್ ಲೈನ್ ಬೆಟ್ಟಿಂಗ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಬ್ಯಾಂಕ್ ಖಾತೆಗಳು ಮತ್ತು ಬ್ಯಾಂಕ್ ಲಾಕರ್‌ಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ರಾಜ್ಯದಲ್ಲಿ ವೀರೇಂದ್ರ ಪಪ್ಪಿ ಮತ್ತು ಅವರ ಆಪ್ತರು, ಸಂಬಂಧಿಕರ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಅದೇ ವೇಳೆ ಸಿಕ್ಕಿಂನಲ್ಲಿ ವೀರೇಂದ್ರ ಅವನ್ನು ಬಂಧಿಸಿ, ಕೋರ್ಟ್‌ಗೆ ಹಾಜರುಪಡಿಸಿ 5 ದಿನ ವಶಕ್ಕೆ ಪಡೆದುಕೊಂಡಿದ್ದಾರೆ.
ಈ ವಿಚಾರಣೆ ಸಂದರ್ಭದಲ್ಲಿ ಪಪ್ಪಿ ಅವರು 18ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳು ಮತ್ತು 3 ಬ್ಯಾಂಕ್ ಲಾಕರ್‌ಗಳನ್ನು ಹೊಂದಿದ್ದಾರೆ. ಈ ಪೈಕಿ ಕೆಲ ಖಾತೆಗಳಲ್ಲಿ ಕೋಟ್ಯಂತರ ರೂ. ಇರುವುದು ಪತ್ತೆಯಾಗಿದೆ. ಮೂರು ಬ್ಯಾಂಕ್ ಲಾಕರ್‌ಗಳಲ್ಲೂ ಕೋಟ್ಯಂತರ ರೂ. ನಗದು ಇರಿಸಿದ್ದಾರೆ. ಹೀಗಾಗಿ ಆ ಹಣದ ಮೂಲವನ್ನು ಇ.ಡಿ. ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ವೀರೇಂದ್ರ ಪಪ್ಪಿ ಅವರ ಜತೆ ರಾಜಕೀಯ ಮುಖಂಡರು ಹಾಗೂ ಕೆಲವು ಐಎಎಸ್, ಐಪಿಎಸ್ ಅಧಿಕಾರಿಗಳು ಇದ್ದಾರೆ ಎಂದು ಹೇಳಲಾಗಿದೆ.


















