ಈ ಭಾನುವಾರ ಸರ್ಕಾರಿ ನೌಕರಸ್ಥರು ರಜೆ ಪಡೆಯುವಂತಿಲ್ಲ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಆದೇಶಿಸಿದ್ದಾರೆ.
ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಇರುವ ಹಿನ್ನೆಲೆಯಲ್ಲಿ ಅನುಮತಿ ಇಲ್ಲದೆ ಯಾರೂ ರಜೆ ಮಾಡುವಂತಿಲ್ಲ ಎಂಬ ಕಟ್ಟುನಿಟ್ಟಿನ ಆದೇಶ ಜಾರಿ ಮಾಡಲಾಗಿದೆ. ಸೆ. 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಹೀಗಾಗಿ ಕಾರ್ಯಕ್ರಮದ ಯಶಸ್ಸಿಗಾಗಿ ಪ್ರತಿಯೊಬ್ಬ ಸರ್ಕಾರಿ ನೌಕರರು ಶ್ರಮಿಸಬೇಕು. ಹೀಗಾಗಿ ರಜೆ ಪಡೆಯುವಂತಿಲ್ಲ ಎಂದು ಆದೇಶಿಸಿದ್ದಾರೆ.
ಮಾನವ ಸರಪಳಿ ರಚನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮ ಆಗಿರುವುದರಿಂದ ಜಿಲ್ಲೆಯ ಪ್ರತಿಯೊಬ್ಬ ಸರ್ಕಾರಿ ನೌಕರರು ಕಡ್ಡಾಯವಾಗಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದ್ದಾರೆ.
ಸೆಪ್ಟೆಂಬರ್ 14, 15 ಮತ್ತು 16ರಂದು ಸಾರ್ವತ್ರಿಕ ರಜೆ ಇದೆ ಎಂದು ಯಾರಾದರೂ ರಜೆ ಪಡೆದಿದ್ದರೆ, ಯಾವುದೇ ಹಂತದ ಅಧಿಕಾರಿ ಇದ್ದರೂ ತಮ್ಮ ಸಿಬ್ಬಂದಿಗಳ ರಜೆ ರದ್ದುಪಡಿಸಿ ಅವರು ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚಿಸಬೇಕು ಎಂದು ಸೂಚಿಸಿದ್ದಾರೆ.