ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಆಫ್ ಬರೋಡಾದ ಅಂಗಸಂಸ್ಥೆಯಾಗಿರುವ ಬರೋಡಾ ಗ್ಲೋಬಲ್ ಶೇರ್ಡ್ ಸರ್ವಿಸಸ್ ಲಿಮಿಟೆಡ್ ನಲ್ಲಿ (Baroda Global Shared Services Limited-BGSSL Recruitment 2026) ಖಾಲಿ ಇರುವ 438 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಎಕ್ಸಿಕ್ಯೂಟಿವ್, ಫೀಲ್ಡ್ ಸೇಲ್ಸ್ ಆಫೀಸರ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬರೋಡಾ ಗ್ಲೋಬಲ್ ಶೇರ್ಡ್ ಸರ್ವಿಸಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 438
ಹುದ್ದೆಗಳ ಹೆಸರು: ಎಕ್ಸಿಕ್ಯೂಟಿವ್, ಫೀಲ್ಡ್ ಸೇಲ್ಸ್ ಆಫೀಸರ್ ಇತ್ಯಾದಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 15
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಎಕ್ಸಿಕ್ಯೂಟಿವ್, ಫೀಲ್ಡ್ ಸೇಲ್ಸ್ ಆಫೀಸರ್, ಟೆಲಿ-ಕಲೆಕ್ಷನ್ ಏಜೆಂಟ್, ಎಂಐಎಸ್ ಅನಾಲಿಸ್ಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಯಾವುದೇ ಪದವಿ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಬೆಂಗಳೂರು ಸೇರಿ ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಮಾಹಿತಿ ಈ ಕೆಳಗಿನಂತಿದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ www.bgss.in ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಿ
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ
ಇದನ್ನೂ ಓದಿ : ಸೌಹಾರ್ದ ಸಹಕಾರ ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್!


















