ವಿಜಯಪುರ: ಭೀಮಾತೀರದ ಭಾಗಪ್ಪ ಹರಿಜನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಇತ್ತೀಚೆಗೆ ನಗರದಲ್ಲಿ ಭಾಗಪ್ಪ ಹರಿಜನ್ ಬರ್ಬರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಎ1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮಣಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು.
ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್ ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕೇವಲ 24 ಗಂಟೆಗಳಲ್ಲಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿ ಪಿಂಟ್ಯಾ, 2024 ಅಕ್ಟೋಬರ್ 8ರಂದು ಭಾಗಪ್ಪನ ಶಿಷ್ಯನಿಂದ ಹತನಾಗಿದ್ದ ರವಿ ಅಗರಖೇಡ್ ನ ಸಹೋದರ. ಪಿಂಟ್ಯಾ ಸೇರಿದಂತೆ ಬಂಧಿತರೆಲ್ಲ ಸ್ನೇಹಿತರು ಎನ್ನಲಾಗಿದೆ.