ಬೆಂಗಳೂರು: ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 5 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 5 ಸೂಪರ್ ವೈಸರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 19 ಕೊನೆಯ ದಿನವಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 05
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್ ಅಥವಾ ಆಫ್ ಲೈನ್
ಹುದ್ದೆಗಳ ಹೆಸರು: ಸೂಪರ್ ವೈಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಸೆಪ್ಟೆಂಬರ್ 19
ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 32 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 48 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರು careers.bhel.in ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್ ಹಾಗೂ ಒಬಿಸಿಯವರಿಗೆ 236 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವವರಿಗೆ ಸೆಪ್ಟೆಂಬರ್ 22ರವರೆಗೆ ಅವಕಾಶ ನೀಡಲಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ವಿಳಾಸ
AGM (HR), Bharat Heavy Electricals Limited, Electronics Division, P. B. No. 2606, Mysore Road, Bengaluru-560026.