ಬೆಂಗಳೂರು : ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ ನಲ್ಲಿ (BHEL Recruitment 2026) ಖಾಲಿ ಇರುವ 23 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 23
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಹುದ್ದೆಗಳ ಹೆಸರು: ಸೂಪರ್ ವೈಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಫೆಬ್ರವರಿ 24
23 ಸೂಪರ್ ವೈಸರ್ (FTA Gr-III) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆಯಾ ಹುದ್ದೆಗಳಿಗೆ ಆಯ್ಕೆಯಾದ ಅನುಗುಣವಾಗಿ ಮಾಸಿಕ 48 ಸಾವಿರ ರೂಪಾಯಿವರೆಗೆ ಮಾಸಿಕ ವೇತನ ನೀಡಲಾಗುತ್ತದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಡಿಪ್ಲೋಮಾ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಗರಿಷ್ಠ 34 ವರ್ಷ ವಯಸ್ಸು ಮೀರಿರಬಾರದು. ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ಇದೆ.
ಅರ್ಜಿ ಶುಲ್ಕ ಎಷ್ಟು?
ಅರ್ಜಿ ಶುಲ್ಕವು ಜನರಲ್ ಕೆಟಗರಿ, ಒಬಿಸಿ ಕೆಟಗರಿ ಅಭ್ಯರ್ಥಿಗಳಿಗೆ 236 ರೂ. ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ careers.bhel.in ವೆಬ್ ಸೈಟ್ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ಸಲ್ಲಿಕೆ ಕುರಿತ ಅಧಿಸೂಚನೆ ಓದಿಕೊಳ್ಳಬೇಕು
ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿಯನ್ನು ಡೌನ್ ಲೋಡ್ ಮಾಡಿಟ್ಟುಕೊಂಡಿರಬೇಕು
ಇದನ್ನೂ ಓದಿ : ಲಕ್ಷ್ಮೀ ಹೆಬ್ಬಾಳ್ಕರ್ ಭರ್ಜರಿ ಬೌಲಿಂಗ್‌ಗೆ ಸತೀಶ್ ಜಾರಕಿಹೊಳಿ ‘ಕ್ಲೀನ್ ಬೋಲ್ಡ್’!



















