ಬೆಂಗಳೂರು: ಕೇಂದ್ರ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಬಯಸುತ್ತಿರುವವರಿಗೆ ಉತ್ತಮ ಅವಕಾಶ ಬಂದೊದಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL Recruitment 2026) ಸಂಸ್ಥೆಯಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 10 ಎಂಜಿನಿಯರ್ ಹಾಗೂ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್
ಒಟ್ಟು ಹುದ್ದೆಗಳು: 10
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್ ಹಾಗೂ ಆನ್ ಲೈನ್
ಹುದ್ದೆಗಳ ಹೆಸರು: ಎಂಜಿನಿಯರ್ ಹಾಗೂ ಸೂಪರ್ ವೈಸರ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 12
ನಾಲ್ಕು ಪ್ರಾಜೆಕ್ಟ್ ಎಂಜಿನಿಯರ್ ಹಾಗೂ ಆರು ಪ್ರಾಜೆಕ್ಟ್ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇದು ಒಳ್ಳೆಯ ಅವಕಾಶವಾಗಿದೆ. ದೇಶದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಗಳಿಂದ ಬಿಇ, ಬಿ.ಟೆಕ್ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 1 ಲಕ್ಷ ರೂಪಾಯಿವರೆಗೆ ಸಂಬಳ ಇರಲಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ bap.bhel.com ವೆಬ್ ಸೈಟ್ ಗೆ ಭೇಟಿ ನೀಡಬೇಕು. ಅಧಿಸೂಚನೆಯನ್ನು ಗಮನವಿಟ್ಟು ಓದಿಕೊಂಡು ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು. ಆನ್ ಲೈನ್ ಅರ್ಜಿಯನ್ನು ಭರ್ತಿ ಮಾಡುವ ಜತೆಗೆ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಳಾಸ
Offline Address: Addl GM/ HR, BHEL-SBD, Prof CNR Rao Circle, IISc Post, Bengaluru – 560012, Karnataka
ಇದನ್ನೂ ಓದಿ: ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ | 2026ರಲ್ಲಿ 1.2 ಕೋಟಿ ಜನರ ನೇಮಕಾತಿ!



















