ರಾಮನಗರ: ಇಂದು ಭೀಮನ ಅಮಾವಾಸ್ಯೆ ಹಿನ್ನೆಲೆ ಚನ್ನಪಟ್ಟಣ ತಾಲೂಕಿನ ಗೌಡಗೆರೆ ಚಾಮುಂಡೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.
ಕ್ಷೇತ್ರದ ಧರ್ಮದರ್ಶಿಗಳಾದ ಮಲ್ಲೇಶ್ ಗುರೂಜಿ ನೇತೃತ್ವದಲ್ಲಿ ಇಂದು ಮುಂಜಾನೆಯಿಂದಲೇ ವಿವಿಧ ಅಭಿಷೇಕ, ಹಾಲರವಿ ಸೇರಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಬಳಿಕ ಮಧ್ಯಾಹ್ನ 12:30ಕ್ಕೆ ಚಾಮುಂಡೇಶ್ವರಿ ರಥೋತ್ಸವ ನಡೆಸಲಾಯಿತು. ಶಾಸಕ ಸಿ.ಪಿ.ಯೋಗೇಶ್ವರ್ ರಥೋತ್ಸವಕ್ಕೆ ಚಾಲನೆ ನೀಡಿ ಕುಟುಂಬ ಸಮೇತ ಪೂಜೆ ಸಲ್ಲಿಸಿದರು.
ಸರತಿ ಸಾಲಿನಲ್ಲಿ ನಿಂತು ಸಾವಿರಾರು ಭಕ್ತರು ರಥೋತ್ಸವದ ಕಣ್ತುಂಬಿಕೊಂಡರು. ಅಲ್ಲದೇ 60 ಅಡಿ ಪಂಚಲೋಹದ ಚಾಮುಂಡೇಶ್ವರಿ ವಿಗ್ರಹದ ದರ್ಶನ ಪಡೆದರು. ಭಕ್ತರಿಗೆ ಅನ್ನದಾನ ಕಾರ್ಯಕ್ರವನ್ನೂ ಏರ್ಪಡಿಸಲಾಗಿತ್ತು.



















