‘ಹನುಮಾನ್’ ಚಿತ್ರದ ನಿರ್ದೇಶಕ ಪ್ರಶಾಂತ್ ವರ್ಮಾ ಅವರಿಂದು ಹೊಸ ಸಿನಿಮಾ ಘೋಷಿಸಿದ್ದಾರೆ. ಸ್ಟಾರ್ ಡೈರೆಕ್ಟರ್ ರಚನೆಯ ಹೊಸ ಸಿನಿಮಾದಲ್ಲಿ ಕನ್ನಡ ನಟಿ ಕುಂದಾಪುದ ಬೆಡಗಿ ಭೂಮಿ ಶೆಟ್ಟಿ ಪ್ರಮಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇದು ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಕಥೆಯನ್ನು ಹೊಂದಿರಲಿದೆ. ಈ ಚಿತ್ರಕ್ಕೆ ʻಮಹಾಕಾಳಿʼ ಎಂಬ ಶೀರ್ಷಿಕೆ ಇಟ್ಟಿದ್ದಾರೆ. ಇದೀಗ ಈ ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ. ಇದರಲ್ಲಿ ಭೂಮಿ ಕಾಳಿ ಪಾತ್ರದಲ್ಲಿ ಎಲ್ಲರ ಗಮನಸೆಳೆದಿದ್ದಾರೆ.
ಫಸ್ಟ್ ಲುಕ್‌ನಲ್ಲಿ ಭೂಮಿ ಶೆಟ್ಟಿ ಮುಖವನ್ನು ಕೆಂಪು ಹಾಗೂ ಗೋಲ್ಡ್ ಬಣ್ಣದಿಂದ ಅಲಂಕಾರಗೊಳಿಸಲಾಗಿದೆ. ಸಾಂಪ್ರದಾಯಿಕ ಆಭರಣಗಳನ್ನು ತೊಟ್ಟು ದೈವಿಕ ಅನುಭವ ನೀಡುವ ಗೆಟಪ್ ನಲ್ಲಿ ಭೂಮಿ ಕಾಣಿಸಿಕೊಂಡಿದ್ದಾರೆ.

ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಅಡಿ ಮಹಾಕಾಳಿ ಚಿತ್ರ ಮಾಡುತ್ತಿದ್ದಾರೆ. ಮಹಾಕಾಳಿ ಸಿನಿಮಾಗೆ ಪ್ರಶಾಂತ್ ಕಥೆ ಬರೆದಿದ್ದು, ಮಹಿಳಾ ನಿರ್ದೇಶಕಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿರುವುದು ವಿಶೇಷ. ಈ ಹಿಂದೆ ಮಾರ್ಟಿನ್ ಲೂಥರ್ ಕಿಂಗ್ ಎಂಬ ಚಿತ್ರ ನಿರ್ದೇಶಿಸಿದ್ದ ಪೂಜಾ ಅಪರ್ಣಾ ಕೊಲ್ಲೂರು, ಮಹಾಕಾಳಿ ಸಾರಥ್ಯ ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ : ಮಂಗಳೂರು | ಆಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರ ಅರೆಸ್ಟ್!


















