ಬೆಂಗಳೂರು | ಮಾಂಡವ್ಯ ಮಹರ್ಷಿಗಳು ನೆಲೆಸಿದ್ದ ಪುಣ್ಯಕ್ಷೇತ್ರ, ಬೆಂಗಳೂರಿನ ಹಲಸೂರಿನ ದಾಮೋದರ ಮೊದಲಿಯಾರ್ ರಸ್ತೆಯಲ್ಲಿ ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿಯ ಭವ್ಯ ಮಂದಿರ ನಿರ್ಮಾಣವಾಗಲಿದ್ದು, ಇದರ ಭೂಮಿ ಪೂಜೆ ಇದೇ ಮಾರ್ಚ್ 8, ಅಂದರೆ ನಾಳೆ ಬೆಳಗ್ಗೆ 11:30ರ ವೃಷಭ ಲಗ್ನದಲ್ಲಿ ನೆರವೇರಲಿದೆ ಎಂದು ಗುರು ಸೇವಾ ಮಂಡಳಿ ಅಭಿವೃದ್ದಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
1986ರಲ್ಲಿ ನಿರ್ಮಾಣವಾಗಿದ್ದ ಹಲಸೂರಿನ ದಾಮೋದರ ಮೊದಲಿಯಾರ್ ರಸ್ತೆಯಲ್ಲಿ ಶ್ರೀ ಗುರುಸೇವಾ ಮಂಡಳಿ ವತಿಯಿಂದ ಶ್ರೀ ರಾಘವೇಂದ್ರ ಬೃಂದಾವನ ಸನ್ನಿಧಿ ನಿರ್ಮಾಣವಾಗಿತ್ತು. 40 ವರ್ಷಗಳ ಕಟ್ಟದ ಶಿಥಿಲಾವಸ್ಥೆಯಲ್ಲಿದ್ದ ಕಾರಣ ಇತ್ತೀಚೆಗಷ್ಟೇ ಜೀರ್ಣೋದ್ದಾರ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ. ರಾಯರ ಅನುಗ್ರಹದಿಂದ ಭಕ್ತರ ಸಹಕಾರದೊಂದಿಗೆ ಇದೀಗ ನೂತನ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗುತ್ತಿದೆ. ಇದರ ಅಂಗವಾಗಿ ಭೂಮಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್, ಬಿಜೆಪಿ ಹಿರಿಯ ನಾಯಕರು ಹಾಗೂ ಬಿಬಿಎಂಪಿ ಮಾಜಿ ಆಡಳಿತ ಪಕ್ಷದ ನಾಯಕರಾದ ಎನ್.ಆರ್.ರಮೇಶ್ ಅವರು ಸೇರಿದಂತೆ ಹಲವು ಗಣ್ಯರು ಹಾಗೂ ಭಕ್ತ ಸಮೂಹ ಭಾಗಿಯಾಗಲಿದ್ದಾರೆ.
ಇದನ್ನೂ ಓದಿ : ಕಳಪೆ ಫಾರ್ಮ್‌ನಲ್ಲಿದ್ದರೂ ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ರವಿಚಂದ್ರನ್ ಅಶ್ವಿನ್!



















