ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಚಾಕೊಲೇಟ್ ಕವರ್ ಬಳಸಿಕೊಂಡು ಡ್ರಗ್ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೀದರ್ ಮೂಲದ ಕಿರಣ್ ಬಂಧಿತ ಆರೋಪಿಯಾಗಿದ್ದು, ದೆಹಲಿಯಿಂದ ಡ್ರಗ್ಸ್ ತರಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದನು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಗಾಂಧಿನಗರ ಪ್ರದೇಶದಲ್ಲಿ ವ್ಯಕ್ತಿಯೊಬ್ಬನಿಗೆ ಡ್ರಗ್ ಹಸ್ತಾಂತರಿಸಲು ಕಾಯುತ್ತಿದ್ದ ವೇಳೆ, ಖಚಿತ ಮಾಹಿತಿ ಮೇರೆಗೆ ಉಪ್ಪಾರಪೇಟೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನಿಂದ ಸುಮಾರು 3 ಕೆಜಿ 900 ಗ್ರಾಂ ಎಂಡಿಎಂಎ (MDMA) ಡ್ರಗ್ ವಶಪಡಿಸಿಕೊಂಡಿದ್ದು, ಇದರ ಅಂದಾಜು ಮೌಲ್ಯ ಸುಮಾರು 3.80 ಕೋಟಿ ರೂ. ಎಂದು ಪೊಲೀಸರು ತಿಳಿಸಿದ್ದಾರೆ. ಡ್ರಗ್‌ಗಳನ್ನು ಚಾಕೊಲೇಟ್ ಕವರ್‌ನಲ್ಲಿ ಮರೆಮಾಡಿ ಸಾಗಾಟ ಮಾಡಲಾಗುತ್ತಿತ್ತು ಎಂಬುದು ತಿಳಿದುಬಂದಿದೆ.
ಪ್ರಸ್ತುತ ಆರೋಪಿಯನ್ನು ವಿಚಾರಣೆ ನಡೆಸಲಾಗುತ್ತಿದ್ದು, ಈ ಜಾಲದಲ್ಲಿ ಇನ್ನೂ ಯಾರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಕಮರ್ಷಿಯಲ್ ಉದ್ದೇಶಕ್ಕೆ ಗೃಹ ಬಳಕೆ ಸಿಲಿಂಡರ್ ಬಳಕೆ : ರಾಜ್ಯಾದ್ಯಂತ 1448 ಎಲ್‌ಪಿಜಿ ಗ್ಯಾಸ್ ಜಪ್ತಿ


















