ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಗುಡ್ ನ್ಯೂಸ್ ದೊರೆತಿದೆ. ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ (Bidar DCC Bank Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಜನರಲ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಬೀದರ್ ಜಿಲ್ಲಾ ಸಹಕಾರಿ ಬ್ಯಾಂಕ್
ಹುದ್ದೆಗಳ ಹೆಸರು: ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳು: 1
ಉದ್ಯೋಗ ಸ್ಥಳ: ಬೀದರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 19
ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗರಿಷ್ಠ 65 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಒಬಿಸಿ, ಜನರಲ್ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.
ಬ್ಯಾಂಕಿಂಗ್, ಹಣಕಾಸು ಹಾಗೂ ಮ್ಯಾನೇಜ್ ಮೆಂಟ್ ವಿಭಾಗದಲ್ಲಿ ಕನಿಷ್ಠ 10-15 ವರ್ಷ ಅನುಭವ ಇರುವವರಿಗೆ ಆದ್ಯತೆ ನೀಡಲಾಗುತ್ತದೆ. ಹಣಕಾಸು, ಅರ್ಥಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು The Chief Executive Officer, District Cooperative Central Bank, Bidar ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ bidardccbank.in ಸಂಪರ್ಕಿಸಿ.
ಇದನ್ನೂ ಓದಿ : ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ – ಓರ್ವ ಸ್ಥಳದಲ್ಲೇ ಸಾವು!



















