ಬೀದರ್ : ಸ್ಪಾ ಹೆಸರಿನಲ್ಲಿ ನಡೆಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಬೀದರ್ ಪೊಲೀಸರು ದಾಳಿ ಮಾಡಿ, ಹೊರರಾಜ್ಯದ ಐವರು ಯುವತಿಯರ ರಕ್ಷಣೆ ಮಾಡಿದ್ದಾರೆ.
ಬೀದರ್ ನಗರದ ಶಿವನಗರದಲ್ಲಿ ಲೋಟಸ್ ಹೆಸರಿನ ಸ್ಪಾನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದಾಗ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ಮಹಾರಾಷ್ಟ್ರ, ಅಸ್ಸಾಂ, ಹರಿಯಾಣ, ಮಧ್ಯಪ್ರದೇಶ ಸೇರಿದಂತೆ ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ ಐದು ಯುವತಿಯರ ಪೊಲೀಸರು ರಕ್ಷಣೆ ಮಾಡಿದ್ದಾರೆ.
ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿ, ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬೀದರ್ ಎಸ್ಪಿ ಪ್ರದೀಪ್ ಗುಂಟಿ ಮಾರ್ಗದರ್ಶನಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು, ನೂತನ ಠಾಣೆಯ ಪೊಲೀಸರು ಸೇರಿದಂತೆ ಬೀದರ್ ಪೊಲೀಸರು ಸೇರಿ ಭರ್ಜರಿ ಕಾರ್ಯಾಚರಣೆ ಮಾಡಿ, ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ರಾಜ್ಯ ಸರ್ಕಾರದಿಂದ ಶೂನ್ಯ ಸಾಧನೆಯ ಸಮಾವೇಶ | ಬಸವರಾಜ ಬೊಮ್ಮಾಯಿ



















